ಮಾದಕ ವ್ಯಸನಿಯಾಗಿದ್ದ ವ್ಯಕ್ತಿ ತನ್ನ ಪತ್ನಿಯನ್ನು ಸುಮಾರು 120 ವ್ಯಕ್ತಿಗಳಿಗೆ 60 ವರ್ಷದ ಪತಿ ಮಾರಾಟ ಮಾಡಿದ ಘಟನೆ ಸ್ವೀಡನ್ನಲ್ಲಿ ನಡೆದಿದೆ.

ಈತ ತನ್ನ ಪತ್ನಿಯ ಜಾಹೀರಾತುಗಳನ್ನು ಪೋಸ್ಟ್ ಮಾಡಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಬೇರೆ ಬೇರೆ ವ್ಯಕ್ತಿಗಳ ಜೊತೆ ಲೈಂಗಿಕ ಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಹಲ್ಲೆ & ಅತ್ಯಾಚಾರ ಸೇರಿದಂತೆ ಗಂಭೀರ ಅಪರಾಧಗಳಿಗಾಗಿ ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಸದ್ಯ ತನಿಖೆ ನಡೆಯುತ್ತಿದೆ.




