ಮುಳಿಯ ಚಿನ್ನಾಭರಣ ಮಳಿಗೆಯ ಮಾಲಕ ಸರಾಫ್ ಮುಳಿಯ ಶ್ಯಾಮ್ ಭಟ್ ವಿಧಿವಶ

Share with

ಪುತ್ತೂರು: ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್‌ ಮುಳಿಯ ಶ್ಯಾಮ ಭಟ್ (81ವ) ಅವರು ಅ.4ರಂದು ನಿಧನರಾದರು. ಪುತ್ತೂರಿನ ಪಾಂಗ್ಲಾಯಿಯಲ್ಲಿರುವ `ಶ್ಯಾಮಲೋಚನಾ’ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ಕೊನೆಯುಸಿರೆಳೆದರು.

ಚಿನ್ನಾಭರಣ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಶ್ಯಾಮ ಭಟ್ ಅವರು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಉದ್ಯಮ ಕ್ಷೇತ್ರದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರು ಪುತ್ರರಾದ ಕೇಶವ ಪ್ರಸಾದ್ ಮುಳಿಯ, ಕೃಷ್ಣನಾರಾಯಣ ಮುಳಿಯ, ಪುತ್ರಿ ವಿದ್ಯಾಸರಸ್ವತಿ, ಅಳಿಯ ಶ್ಯಾಮಸುಂದ‌ರ್, ಸೊಸೆಯಂದಿರಾದ ಕೃಷ್ಣವೇಣಿಪ್ರಸಾದ್ ಮುಳಿಯ, ಅಶ್ವಿನಿಕೃಷ್ಣ ಮುಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಅ.6ರಂದು ಸಾರ್ವಜನಿಕ ದರ್ಶನ

ಮೃತರ ಅಂತಿಮ ದರ್ಶನ ಹಾಗೂ ನಮನ ಸಲ್ಲಿಸಲು ಅ.6ರಂದು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪುತ್ರರಾದ ಕೇಶವ ಪ್ರಸಾದ್ ಮುಳಿಯ ಮತ್ತು ಕೃಷ್ಣನಾರಾಯಣ ಮುಳಿಯ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *