ಮಂಜೇಶ್ವರ: ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ಮಗ..!! ನೆರೆಮನೆಯ ಯುವತಿಗೂ ಬೆಂಕಿ ಹಚ್ಚಿ ಪರಾರಿ..!!

Share with

ಮಂಜೇಶ್ವರ: ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ದಾರುಣ ಘಟನೆ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದಿದೆ. ತಾಯಿಯನ್ನು ಕೊಂದ ಬಳಿಕ, ನೆರೆಮನೆಯ ಮಹಿಳೆಯನ್ನೂ ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ್ದಾನೆ.

ತಾಯಿಗೆ ಬೆಂಕಿ ಹಚ್ಚಿ ಕೊಂದ ಮಗ

ನೆರೆಮನೆಯ ಮಹಿಳೆ ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರ್ಕಾಡಿ ನಲ್ಲಂಗಿ ನಿವಾಸಿ ದಿ.ಲೂಯಿಸ್ ಮೊಂತೇರೋರವರ ಪತ್ನಿ ಹಿಲ್ಲಾ (60) ಮೃತಪಟ್ಟ ಮಹಿಳೆ. ಪುತ್ರ ಮೇಲ್ವಿನ್ ಈ ಕೃತ್ಯವೆಸಗಿದ್ದಾನೆ. ನೆರೆಮನೆಯ ವಿಕ್ಟರ್ ರವರ ಪತ್ನಿ ಲೊಲಿಟಾ (30) ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೂನ್ 26 ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಪುತ್ರ ಮೇಲ್ವಿನ್ ಮೊಂತೇರೋ (33) ಈ ಕೃತ್ಯವೆಸಗಿ ಪರಾರಿಯಾಗಿದ್ದಾನೆ.

ಮೃತ ತಾಯಿ

ತಡರಾತ್ರಿ ತಾಯಿಗೆ ಬೆಂಕಿ ಹಚ್ಚಿದ ಬಳಿಕ, ನೆರೆಮನೆಯ ಮಹಿಳೆಯನ್ನು ತಾಯಿಗೆ ಹುಷಾರಿಲ್ಲವೆಂದು ಮನೆಗೆ ಕರೆದ ಬಳಿಕ ಆಕೆಗೂ ಬೆಂಕಿ ಹಚ್ಚಿದ್ದಾನೆ.

ತಾಯಿ ಮೃತ ದೇಹ ಮನೆಯ ಹಿಂಭಾಗದ ಪೊದರುಗಳಡೆಯಲ್ಲಿ ದೊರೆತಿದೆ. ಮನೆಯಲ್ಲಿ ತಾಯಿ ಮತ್ತು ಮಗ ಮಾತ್ರವೇ ವಾಸಿಸುತ್ತಿದ್ದು, ಇನ್ನೋರ್ವ ಮಗ ಅಲ್ವಿನ್ ಮೊಂತೇರೋ ಕೊಲ್ಲಿ ರಾಷ್ಟ್ರದಲ್ಲಿದ್ದಾನೆ. ಆರೋಪಿ ಮೇಲ್ವಿನ್ ಕಟ್ಟಡ ಕಾರ್ಮಿಕನಾಗಿದ್ದು, ಕೊಲೆ ಕೃತ್ಯಕ್ಕೆ ಕಾರಣವೇನೆಂಬುದು ತಿಳಿದು ಬಂದಿಲ್ಲ. ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *