ಧರ್ಮಸ್ಥಳದಲ್ಲಿ ‘ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ’ ಘೋಷಣಾ ಫಲಕ ಅನಾವರಣ

Share with

'ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ’ ಎನ್ನುವ ಘೋಷಣಾ ಫಲಕವನ್ನು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಅನಾವರಣ ಮಾಡಿದರು.

ಧರ್ಮಸ್ಥಳ: ಧರ್ಮಸ್ಥಳವು ‘ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ’ ಎನ್ನುವ ಘೋಷಣಾ ಫಲಕವನ್ನು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಅನಾವರಣ ಮಾಡಿದರು.

ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನದಂತೆ ಧರ್ಮಸ್ಥಳವು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎನ್ನುವ ಘೋಷಣಾ ಫಲಕ ಅನಾವರಣ ಮಾಡಿ ಅವರು ಮಾತನಾಡಿದರು.

ಬೀದರ್, ಕಲಬುರಗಿ, ಮಂಗಳೂರು, ಮೈಸೂರು ಮತ್ತು ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರಗಳನ್ನಾಗಿಸಲು ಆಯ್ಕೆ ಮಾಡಲಾಗಿದ್ದು, ಧರ್ಮಸ್ಥಳದ ಮೂಲಕ ಕರ್ನಾಟಕ ರಾಜ್ಯವೇ ದೇಶದ ಪ್ರಥಮ ಪ್ಲಾಸ್ಟಿಕ್ ಮುಕ್ತ ರಾಜ್ಯವಾಗಲಿ ಎಂದು ಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಪ್ರಸನ್ನ ಭಕ್ತ, ಬೆಳ್ತಂಗಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್‌ ಸ್ವಾಗತಿಸಿ, ಪಿಡಿಒ ಉಮೇಶ್‌ ಕೆ. ಅವರು ವಂದಿಸಿದರು.


Share with

Leave a Reply

Your email address will not be published. Required fields are marked *