ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Share with

ಕಾಸರಗೋಡು : ಕೀರ್ತಿಶೇಷ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದಲ್ಲಿ
ಬಿಡುಗಡೆಗೊಳಿಸಲಾಯಿತು. ಧರ್ಮಸ್ಥಳದ ಧರ್ಮಧಿಕಾರಿ ಡಾ|ಡಿ.ವಿರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಜಯಪ್ರಕಾಶ್ ತೊಟ್ಟೆತ್ತೋಡಿ, ಪ್ರತಿಷ್ಠಾನದ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು,ಟ್ರಸ್ಟ್ ಸದಸ್ಯ ಯೋಗೀಶ್ ರಾವ್ ಚಿಗುರುಪಾದೆ, ಸುಬ್ರಹ್ಮಣ್ಯ ಹೊಳ್ಳ, ಟ್ರಸ್ಟಿನ ಗೌರವ ಸದಸ್ಯ,ಧರ್ಮಸ್ಥಳ ಭಜನಾ ಪರಿಷತ್ತಿನ ಕಾಸರಗೋಡು ಸಮಿತಿ ಅಧ್ಯಕ್ಷ ಕೆ.ಎನ್.ವೆಂಕಟ್ರಮಣ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು‌. ಡಿ.26ರಂದು ಸಾಂಸ್ಕೃತಿಕ ಭವನದ ಲೋಕಾರ್ಪಣೆ ನಡೆಯಲಿದೆ.


Share with

Leave a Reply

Your email address will not be published. Required fields are marked *