
ಕರ್ನಾಟಕದ ವಿವಿಧ ಭಾಗದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ಹಲವೆಡೆ ಅಬ್ಬರದ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಇನ್ನೂ 5 ದಿನ ರಣಭೀಕರ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ

ಬಂಗಾಳಕೊಲ್ಲಿಯಲ್ಲಿ ಎದುರಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಒಂದು ವಾರಗಳ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಐಎಂಡಿ ರಿಪೋರ್ಟ್ ತಿಳಿಸಿದೆ. ಏಪ್ರಿಲ್ 18ರ ವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ.




