ಬೆಸ್ಕಾಂ ವಿದ್ಯುತ್ ಸಂಪರ್ಕದಲ್ಲಿ ಜುಲೈ 1ರಿಂದ ಮಹತ್ವದ ಬದಲಾವಣೆಯಾಗಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025ರ ಜುಲೈ 1ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸಬೇಕಿದೆ.