ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಸೋಲುಂಡಿರುವ ಬಿಜೆಪಿ ನಾಯಕ ವಿ. ಸೋಮಣ್ಣ ಕಾರ್ಯಾಧ್ಯಕ್ಷ ಸ್ಥಾನ ಕೊಡುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದಾರೆ.
‘ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಅದು ಸಾಧ್ಯವಾಗದಿದ್ದರೆ ಕಾರ್ಯಾಧ್ಯಕ್ಷ ಹುದ್ದೆಗೆ ಪರಿಗಣಿಸಿ’ ಎಂದು ಸೋಮಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನಲ್ಲಿ ಹಲವು ಕಾರ್ಯಾಧ್ಯಕ್ಷರುಗಳಿದ್ದು, ಅದೇ ಮಾದರಿಯನ್ನು ಬಿಜೆಪಿ ಸಹ ಅನುಸರಿಸಬಹುದಲ್ಲವೇ? ಎಂದು ಸೋಮಣ್ಣ ಹೇಳಿದ್ದಾರೆ.