
ತೆಲಂಗಾಣ: ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಕುಡುಕ ತಂದೆಯೊಬ್ಬ 14 ವರ್ಷದ ಮಗನನ್ನು ಹೊಡೆದು ಕೊಂದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ಸಂಭವಿಸಿದೆ.
ತಡವಾಗಿ ಮನೆಗೆ ಬಂದಿದ್ದಕ್ಕಾಗಿ ಮಗನ ಎದೆಗೆ ತಂದೆ ಹೊಡೆದಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ. ಘಟನೆ ನಡೆದ ಸಮಯದಲ್ಲಿ ಆರೋಪಿ ಮದ್ಯದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಆತ ಪ್ರಸ್ತುತ ಪರಾರಿಯಾಗಿದ್ದಾನೆ.