ಬೆಳ್ತಂಗಡಿ: ಧರ್ಮಸ್ಥಳದ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಕೆಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಗೆ ಸಾಕ್ಷ್ಯಾಧಾರ ಕೊರತೆಯಿಂದ ನಿರ್ದೋಷಿ ಎಂದು ತೀರ್ಪು ನೀಡಿದ್ದು ಇದೀಗ ನ.5 ಶನಿವಾರದಂದು ಸಿಬಿಐ ತನಿಖಾಧಿಕಾರಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಕೆಲವೇ ದಿನಗಳಲ್ಲಿ ಹೈಕೋರ್ಟ್ ಪ್ರಕರಣ ದಾಖಲಿಸಿದ ದಾವೆಯ ಸಿಸಿ ಹೊರಡಿಸಲಿದೆ.
ರಾಜ್ಯಾದ್ಯಂತ ಸೌಜನ್ಯ ಅವರಿಗೆ ನ್ಯಾಯ ಸಿಗುವಂತೆ ಕೂಗು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳ ಈ ನಡೆ ಕುತೂಹಲವನ್ನು ಮೂಡಿಸಿದೆ.