ಬೆಳ್ತಂಗಡಿ: ಧರ್ಮಸ್ಥಳ ಮಣ್ಣಸಂಕದ ಬಳಿ ಅ. 9ರ 2012ರಲ್ಲಿ ನಡೆದಿರುವ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ರಾಜ್ಯಾದ್ಯಂತ ಕೂಗು ಕೇಳಿಬರುತ್ತಿದೆ. ಇದೀಗ ಸೌಜನ್ಯ ಪ್ರಕರಣ ಸಂಬಂಧಿಸಿದಂತೆ ಪುತ್ತೂರು, ಕಡಬ, ಯುವ ಒಕ್ಕಲಿಗರ ಸಂಘ ಸೇರಿದಂತೆ ಜಿಲ್ಲೆಯ ಎಲ್ಲಾ ಯುವ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸೌಜನ್ಯ ಮನೆಗೆ ಜು.30ರಂದು ಭೇಟಿ ನೀಡಿ ಮುಂದಿನ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಒಕ್ಕಲಿಗ ಸಂಘದ ಪದಾಧಿಕಾರಿಗಳು ಭಾಗಿಯಾಗಿದ್ದರು.