ಸಿ.ಎಂ. ಸಿದ್ದರಾಮಯ್ಯರನ್ನು ಭೇಟಿಯಾದ ಸೌಜನ್ಯ ಕುಟುಂಬ, ಮಹೇಶ್ ಶೆಟ್ಟಿ ತಿಮರೋಡಿ

Share with

ಬೆಳ್ತಂಗಡಿ: 11 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿರುವ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯರವರ ಕುಟುಂಬ ಮತ್ತು ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರು ಮುಖ್ಯಮಂತ್ರಿ ಸಿದ್ದರಾಮಯಯ್ಯರವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಯಾಗಿದ್ದ ಸೌಜನ್ಯರವರನ್ನು ಅಪಹರಿಸಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದ್ದ ಪ್ರಕರಣದ ಪ್ರತಿಭಟನೆಯ ಕಾವು ಜೋರಾಗುತ್ತಿರುವಂತೆಯೇ ಇದೀಗ ಸೌಜನ್ಯರವರ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ಸಹೋದರಿ ಸೌಂದರ್ಯ ಮತ್ತು ಸೌಜನ್ಯ ಪರ ಹೋರಾಟದ ಮುಂಚೂಣಿಯಲ್ಲಿರುವ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖಂಡ ತಿಮರೋಡಿ ಮಹೇಶ್ ಶೆಟ್ಟಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿಯಾಗಿರುವುದು ಕುತೂಹಲ ಉಂಟು ಮಾಡಿದೆ.


Share with

Leave a Reply

Your email address will not be published. Required fields are marked *