
ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಕಾರು ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್‌ಪುರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ.

ಗಂಗೂಲಿ ಅವರ ಕಾರಿಗೆ ಸಿಂಗೂರ್ ಬಳಿ, ಇದ್ದಕ್ಕಿದ್ದಂತೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಗಂಗೂಲಿ ಅವರಿಗಾಗಲಿ, ಅವರ ಬೆಂಗಾವಲು ಪಡೆಯಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ. ಆದಾಗ್ಯೂ, ಬೆಂಗಾವಲು ಪಡೆಯಲ್ಲಿದ್ದ ಎರಡು ವಾಹನಗಳು ಜಖಂಗೊಂಡಿದೆ.
ಈ ಅಪಘಾತದಲ್ಲಿ ಸೌರವ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.




