ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 21 ನೇ ಚಾತುರ್ಮಾಸ್ಯದ ಸುಸಂದರ್ಭದಲ್ಲಿ ದಿ.18.08.2024 ರ ಆದಿತ್ಯವಾರದಂದು ಅಪರಾಹ್ಣ 3.30ಕ್ಕೆ ಕಟೀಲು ಶ್ರೀ ಕ್ಷೇತ್ರದ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಕಮಲಾದೇವಿ ಪ್ರಸಾದ ಆಸ್ರಣ್ಣ ರವರು “ದ್ರುವ ಚರಿತ್ರೆ” ಮತ್ತು “ಮಹಾಭಾರತದಲ್ಲಿ ಯೋಗ” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಶ್ರೀ ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.