ಸುಬ್ರಹ್ಮಣ್ಯ: ಪೊಂಗಲ್/ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವ/ರಜಾ ದಿನಗಳ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೇ ಯಶವಂತಪುರ ಮತ್ತು ಮಡಗಾಂವ್ ನಡುವೆ ಪ್ರತಿ ದಿಕ್ಕಿನಲ್ಲಿ ತಲಾ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಸಂಖ್ಯೆ 06287 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ಜ. 13 ಮತ್ತು 23ರಂದು ಬೆಳಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 6.45ಕ್ಕೆ ಮಡಗಾಂವ್ ತಲುಪಲಿದೆ.
ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 06288 ಮಡ ಗಾಂವ್- ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಜ. 18 ಮತ್ತು 26ರಂದು ಬೆಳಗ್ಗೆ 11ಕ್ಕೆ ಮಡಗಾಂವ್‌ನಿಂದ ಹೊರಟು ಮರುದಿನ ಬೆಳಿಗ್ಗೆ 4.45ಕ್ಕೆ ಯಶವಂತಪುರ ತಲಪಲಿದೆ.




