ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಡಿಕೆ ಶಿವಕುಮಾರ್

Share with

ಮಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರಕ್ಕೆ ಭೇಟಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಮಿಥುನ್ ರೈ,  ರಕ್ಷಿತ್ ಶಿವರಾಂ,  ನಾಗೇಶ್ ಕುಮಾರ್ , ರಂಜನ್ ಗೌಡ, ಅಭಿನಂದ್ ಹರೀಶ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ನಂತರ ಡಿಕೆ ಶಿವಕುಮಾರ್ ಕುಕ್ಕೆಗೆ ಆಗಮಿಸಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ, ಸ್ಥಳೀಯ ಕಾಂಗ್ರೆಸ್ ನಾಯಕರು ಅವರಿಗೆ ಸಾಥ್ ನೀಡಿದರು.


Share with

Leave a Reply

Your email address will not be published. Required fields are marked *