ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ವಿಭಾಗ ಬಂಟ್ವಾಳ ಇವುಗಳ ಸಯೋಗದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 91ನೇ ಶೌರ್ಯ ವಿಪತು ನಿರ್ವಹಣಾ ಸಮಿತಿ ಉದ್ಘಾಟನಾ ಕಾರ್ಯಕ್ರಮ. ದಿನಾಂಕ 17-6-2024 ನೇ ಬೆಳಿಗ್ಗೆ ಗಂಟೆ 10 ಕ್ಕೆ ಗ್ರಾಮಾಭಿವೃದ್ಧಿ ಯೋಜನೆ ಯ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧ ದಲ್ಲಿ ಜರಗಲಿರುವುದು. ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ರೊನಾಲ್ಡ್ ಡಿಸೋಜ ರವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯಕ್ ನೂತನ ಶೌರ್ಯ ಸಮಿತಿಯ ಉದ್ಘಾಟನೆಯನ್ನು ಮಾಡಲಿರುವರು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಬೆಳ್ತಂಗಡಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಯ್ಸ್ , ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಜಿಲ್ಲಾ ಅಗ್ನಿಶಾಮಕ ಠಾಣಾಧಿಕಾರಿ ಭರತ್ ಕುಮಾರ್, ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ 1 ರ ನಿರ್ದೇಶಕರಾದ ಮಹಾಬಲ ಕುಲಾಲ್, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಚಿದಾನಂದ ರೈ ಕಕ್ಯೆ, ಮೊದಲಾದವರು ಉಪಸ್ಥಿತರಿರುವರು.