ಕಾಸರಗೋಡು: ಶ್ರೀ ಮಲ್ಲಿಕಾರ್ಜುನ ಕ್ಷೇತ್ರ ಸಮೀಪದ ಶ್ರೀ ಧರ್ಮಶಾಸ್ತಾ ಸೇವಾ ಸಂಘದ ವತಿಯಿಂದ ನಡೆಯುವ 58ನೇ ವರ್ಷದ ತಿರುವಿಳಕ್ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಎಡನೀರು ಶ್ರೀಸಚ್ಚಿದಾನಂದ ಸ್ವಾಮೀಜಿ ಬಿಡುಗಡೆಗೊಳಿಸಿದರು.
ಡಿ.7ರಿಂದ 10ರ ವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಸಮಿತಿಯ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷರಾದ ಧಾರ್ಮಿಕ ಮುಂದಾಳು ಕೆ.ಎನ್.ವೆಂಕಟ್ರಮಣ ಹೊಳ್ಳ, ಪ್ರ.ಕಾರ್ಯದರ್ಶಿ ಸುರೇಶ್ ಸುವರ್ಣ, ಜತೆ ಕಾರ್ಯದರ್ಶಿ ಮಹೇಶ್ ನೆಲ್ಲಿಕುಂಜೆ, ಕರುಣಾಕರ ಗುರುಸ್ವಾಮಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.