ಮಂಗಳೂರು: 2023- 24ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಹಾಜರಾಗಿದ್ದರು. 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.
ಇದೀಗ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆ ಶೇಕಡಾ 94 ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ. 92.12 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಹೊಂದಿದೆ. ಶಿವಮೊಗ್ಗ ಶೇ.88.67 ಫಲಿತಾಂಶದಿಂದ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ.
ರಾಜ್ಯಕ್ಕೆ ಬಾಲಗಲಕೋಟೆ ಮುಧೋಳಿನ ಅಂಕಿತಾ 625 ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. ದಕ್ಷಿಣ ಕನ್ನಡ ಚಿನ್ಮಯ್ 624 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳು ಫಲಿತಾಂಶವನ್ನು kseab.karnataka.gov.in ಅಥವಾ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸ ಬಹುದಾಗಿದೆ.