
ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ.21 ರಿಂದ ಎ.4 ರವರೆಗೆ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತ್ರಧರಿಸಬಾರದು.
ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಟಿಂಗ್ ನಡೆಸುವ ಸಿಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಬೇಕು.
ಪರೀಕ್ಷೆಗೆ ಹಾಜರಾಗುವವರು ಹ್ಯಾಂಡ್ ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್ ತಪಾಸಣೆಗೆ ಒಳಗಾಗಬೇಕು.
ಮೆಟಲ್ ವಾಟರ್ ಬಾಟಲ್ಸ್ ಅಥವಾ ನಾನ್ ಟ್ರಾನ್‌ಸ್ಪರೆಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವಂತಿಲ್ಲ.
ಮೊಬೈಲ್/ ಸೆಲ್ಯುಲರ್‌ಫೋನ್, ಟ್ಯಾಬ್ಲೆಟ್, ಪೆನ್‌ಡ್ರೆಂವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್, ಕೈಚೀಲ, ಪರ್ಸ್, ನೋಟು, ಟಾರ್ಚ್, ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರ ಉಪಕರಣಗಳನ್ನು ಕೊಂಡೊಯ್ಯುವಂತಿಲ್ಲ.
ಹಿಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡಬೇಕಾದುದು ಕಡ್ಡಾಯ.
ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ತ್ರ ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ/ಅಭ್ಯರ್ಥಿಗಳು ಮೊಬೈಲ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ.
ಕರ್ನಾಟಕ ಲೋಕ ಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಈ ನಿಷೇಧಾಜ್ಞೆ ಆದೇಶ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಲೂ ಮಾರ್ಚ್ 21 ರಿಂದ ಎಪ್ರಿಲ್ 4 ರವರೆಗೆ ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.