ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಾಂತ ಎಸೆಸ್ಸೆಲ್ಸಿ ಪರೀಕ್ಷೆ ಆರಂಭ

Share with

ದಕ್ಷಿಣ ಕನ್ನಡ/ಉಡುಪಿ: ಮಾ.25ರಿಂದ ರಾಜ್ಯಾದ್ಯಾಂತ ಎಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಾಂತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅಣಿಯಾಗಿದ್ದಾರೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಾಂತ ಎಸೆಸ್ಸೆಲ್ಸಿ ಪರೀಕ್ಷೆ ಆರಂಭ

ದ.ಕ. ಜಿಲ್ಲೆಯಲ್ಲಿ 27,663 ಶಾಲಾ ವಿದ್ಯಾರ್ಥಿಗಳು 1053 ಖಾಸಗಿ ವಿದ್ಯಾರ್ಥಿಗಳು 1,632 ಪುನರಾವರ್ತಿತ ಅಭ್ಯರ್ಥಿಗಳು 30,348 ಪರೀಕ್ಷೆ ಎದುರಿಸಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 88 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಇನ್ನು ಉಡುಪಿ ಜಿಲ್ಲೆಯಲ್ಲಿ ಒಟ್ಟು 14,331 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 51 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಅಭ್ಯರ್ಥಿಗಳ ಅನುಕೂಲಕ್ಕಾಗಿ ಸೂಕ್ತ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಅಗತ್ಯ ಅಸನದ ವ್ಯವಸ್ಥೆ ಮಾಡಲಾಗಿದ್ದು, ಕುಡಿಯುವ ನೀರು, ಶೌಚಾಲಯ ಹಾಗೂ ಇತರ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.


Share with

Leave a Reply

Your email address will not be published. Required fields are marked *