ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ – ಉಡುಪಿ ದ್ವಿತೀಯ ಸ್ಥಾನ

Share with

ಕರ್ನಾಟಕ ಸರಕಾರ ಪಠ್ಯಕ್ರಮದ 2024-25ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶೇ. 62.34 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ (91.12%) ಮೊದಲ ಸ್ಥಾನ ಗಳಿಸಿದೆ. ಉಡುಪಿ (89.96%) ಎರಡನೇ ಸ್ಥಾನ ಪಡೆದರೆ, ಉತ್ತರಕನ್ನಡ (83.19%) ಮೂರನೇ ಸ್ಥಾನ ಪಡೆದಿದೆ.

ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.


Share with

Leave a Reply

Your email address will not be published. Required fields are marked *