ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025 ನೇ ಸಾಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ.3 ರಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ಕುರಿತು ಕೆಎಸ್‌ಇಎಬಿ (KSEAB) ಅಧಿಕೃತ ಘೋಷಣೆ ಮಾಡಿಲ್ಲ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ.21 ರಿಂದ ಎಪ್ರಿಲ್ 4 ರಂದು ನಡೆದಿತ್ತು. ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎನ್ನಲಾಗಿದ್ದು, ಮೇ.3 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ನೋಡುವ ರೀತಿ ಇಲ್ಲಿದೆ;
https://karresults.nic.in/ ಮತ್ತು kseab.karnataka.gov.in ಭೇಟಿ ನೀಡಿ.
‘SSLC ಫಲಿತಾಂಶ 2025’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್ಮೀಟ್ ಮೇಲೆ ಕ್ಲಿಕ್ ಮಾಡಿ.
ನಂತರ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನಗೊಳ್ಳುತ್ತದೆ.