ಉಪ್ಪಿನಂಗಡಿ: ಹೃದಯ ಸಂಬಂಧಿ ಕಾಯಿಲೆಯಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಆ. 21ರಂದು ರಾತ್ರಿ ವರದಿಯಾಗಿದೆ. ಉಪ್ಪಿನಂಗಡಿ ಪೆದಮಲೆ ನಿವಾಸಿ ಸಮದ್ ಹಾಜಿ ರವರ ಪುತ್ರ ಅಹ್ಮದ್ ಸಹದ್(15) ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್ ನ ಹತ್ತನೇ ತರಗತಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸಹದ್ ಕಳೆದ ಹಲವು ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಳಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಸಹದ್ ರವರ ಅಕಾಲಿಕ ಮೃತ್ಯುಗೆ ಇಂಡಿಯನ್ ಸ್ಕೂಲ್ ಸಂತಾಪ ಸೂಚಿಸಿ, ಆ.22ರಂದು ಇಂಡಿಯನ್ ಸ್ಕೂಲ್ ಉಪ್ಪಿನಂಗಡಿಗೆ ರಜೆ ಘೋಷಿಸಲಾಗಿದ್ದು, ಆ. 22 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಆ. 23ಕ್ಕೆ ಮುಂದೂಡಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.