ಮಂಗಳೂರು: ಅ.26ರಂದು ರಾತ್ರಿ ಮೆಲ್ಕಾರ್ ನಲ್ಲಿ ನಡೆದ ಚೂರಿ ಇರಿತದಲ್ಲಿ ಮೂವರಿಗೆ ಗಾಯಗಳಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಹುಲಿ ವೇಷ ಹಾಕುವ ಎರಡು ತಂಡಗಳ ನಡುವೆ ಕೆಲವು ದಿನಗಳ ಹಿಂದೆ ನಡೆದ ಶಾರದೋತ್ಸವ ವೇಳೆ ಗಲಾಟೆ ನಡೆದಿತ್ತು. ಗಲಾಟೆ ಮುಂದುವರಿದಿದ್ದು, ನಿನ್ನೆ ರಾತ್ರಿ ಎರಡು ತಂಡಗಳ ನಡುವೆ ಜಗಳವಾಗಿದೆ.
ಈ ವೇಳೆ ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಗೆ ಚೂರಿಯಿಂದ ಇರಿಯಲಾಗಿದ್ದು, ಓರ್ವನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳಿಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.