ನ.18ರಂದು ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ

Share with

ಮಂಗಳೂರು: ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನವೆಂಬರ್ 18ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿಯಮಿತ ಮಂಗಳೂರು ಇದರ ಅಧ್ಯಕ್ಷ ಡಾ | ಎಂ.ಎನ್ ರಾಜೇಂದ್ರ ಕುಮಾರ್ ಅವರು ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ 70ನೇ ಸಹಕಾರಿ ಸಪ್ತಾಹದ 5ನೇ ದಿನ ಅಂದರೆ ನವೆಂಬರ್ 18ರಂದು ಬೆಳಿಗ್ಗೆ 10 ಗಂಟೆಗೆ ಉರ್ವ ಕ್ರಿಕೆಟ್ ಮೈದಾನದಲ್ಲಿ ಸಹಕಾರಿ ಸಪ್ತಾಹವನ್ನು ಆಚರಿಸುತ್ತಿದ್ದೇವೆ. ಇದರಲ್ಲಿ ವಸ್ತು ಪ್ರದರ್ಶನ ಉದ್ಘಾಟನೆಯನ್ನು ಸ್ಪೀಕರ್‌ ಯು ಟಿ ಖಾದರ್‌ ನೆರವೇರಿಸಲಿದ್ದಾರೆ. ಸಮಾರಂಭದ ಉದ್ಘಾಟನೆಯನ್ನು ಸಹಕಾರ ಸಚಿವ ಕೆ.ಎನ್ ರಾಜಣ್ಣ ನೆರವೇರಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡುವರು. ಸಂಸದ ನಳಿನ್‌ ಕುಮಾರ್ ಕಟೀಲು ಅವರು ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರ ನೀಡುವರು. ಸಹಕಾರಿ ಧ್ವಜಾರೋಹಣವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಅವರು ನೆರವೇರಿಸುವರು.

ಅಧ್ಯಕ್ಷತೆಯನ್ನು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ವಹಿಸಲಿದ್ದಾರೆ. ಮೆರವಣಿಗೆ ಉದ್ಘಾಟನೆಯನ್ನು ಶಾಸಕ ವೇದವ್ಯಾಸ್ ಕಾಮತ್‌ ಅವರು ಮಾಡಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಉತ್ತರ ಕ್ಷೇತ್ರ ಶಾಸಕ ಡಾ| ಭರತ್‌ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಉಪಸ್ಥಿತರಿರುವರು.

ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್‌, ಸಹಕಾರ ಸಂಘಗಳ ನಿಬಂಧಕ ಡಾ| ಕೆ ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ| ಉಮೇಶ್‌ ಜಿ, ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಿ ಜಯಕರ ಶೆಟ್ಟಿ ಇಂದ್ರಾಳಿ, ನಿದೇರ್ಶಕ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಮೊದಲಾದವರಿದ್ದರು.


Share with

Leave a Reply

Your email address will not be published. Required fields are marked *