ಉಡುಪಿ: ಫೆ.10,11ರಂದು ವಕೀಲರ ರಾಜ್ಯಮಟ್ಟದ ಸಾಂಸ್ಕ್ರತಿಕ ಸ್ಪರ್ಧೆ ‘ಕಲಾ ಸಂಭ್ರಮ’

Share with

ಉಡುಪಿ: ಉಡುಪಿ ವಕೀಲರ ಸಂಘವು ಫೆಬ್ರವರಿ 10 ಮತ್ತು 11ರಂದು ಉಡುಪಿ ನ್ಯಾಯಾಲಯ ಆವರಣದಲ್ಲಿ ವಕೀಲರಿಗಾಗಿ ಆಯೋಜಿಸಿರುವ ರಾಜ್ಯ ಮಟ್ಟದ ಸಾಂಸ್ಕ್ರತಿಕ ಸ್ಪರ್ಧಾಕೂಟ ‘ಕಲಾ ಸಂಭ್ರಮ’ ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಜ.29ರಂದು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

'ಕಲಾ ಸಂಭ್ರಮ' ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಜ.29ರಂದು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಸಾಂಸ್ಕ್ರತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿ ಸದಸ್ಯ ಆರೂರು ಸುಕೇಶ್ ಶೆಟ್ಟಿ, ಸೀನಿಯರ್ಸ್ ಕಮಿಟಿ ಸದಸ್ಯರಾದ ಆನಂದ ಮಡಿವಾಳ, ಜಯಕೃಷ್ಣ ಆಳ್ವ ಹಾಗೂ ಹಿರಿಯ ನ್ಯಾಯವಾದಿ ಎ.ಸಂಕಪ್ಪ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *