ಮದ್ಯಪಾನ ಮಾಡಿ ವಾಹನ ಚಲಾಯಿಸುವ ವಾಹನ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡು, ಪ್ರಕರಣಗಳನ್ನು ದಾಖಲಿಸುವ ಕುರಿತು ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸ್ ಇಲಾಖೆಗೆ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶ ಅಭಯ್ ಮನೋಹರ್ ಸಪ್ಪೆ ಸೂಚನೆ ನೀಡಿದ್ದಾರೆ.

ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ರಸ್ತೆ ಅಪಘಾತಗಳಿಂದಾಗಿ ಮೃತಪಡುವವರ & ಗಾಯಗೊಳ್ಳುವವರ ಸಂಖ್ಯೆಯು ಹೆಚ್ಚಾಗುತ್ತಿವೆ. ಹಾಗಾಗಿ, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆಯ ಕುರಿತು ನಡೆದ ಸಭೆಯಲ್ಲಿ ಈ ಮಹತ್ವದ ಸೂಚನೆ ನೀಡಲಾಗಿದೆ.




