ಮಂಡ್ಯ: ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಉದ್ವಿಗ್ನ ಪರಿಸ್ಥಿತಿಯಿದೆ.

ರವಿವಾರ ರಾತ್ರಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ನ ಡೆಯುತ್ತಿದ್ದ ಸಂದರ್ಭದಲ್ಲಿ ಗಲಾಟೆ ನಡದಿತ್ತು. ಪಟ್ಟಣದ ಮಸ್ಟಿದ್ ಹುಸೇನ್ ಮಸೀದಿಯ ಸುನ್ನಿ ಚೌಕದ ಬಳಿ ಮೆರವಣಿಗೆ ಬ ರುತ್ತಿದ್ದಾಗ ಯುವಕರು ನೃತ್ಯ ಮಾಡಿಕೊಂಡು ಬರುವಾಗ ಮಸೀದಿ ಮೇಲಿಂದ ಕಲ್ಲು ತೂರಿ ಬಂದಿದೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಯುವಕರು ಕೂಡ ಪ್ರತಿಯಾಗಿ ಮಸೀದಿಯತ್ತ ಕ ಲ್ಲೆಸೆದಿದ್ದಾರೆ. ಇದರಿಂದ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಮಹಿಳಾ ಹೋಂ ಗಾರ್ಡ್, ಪೊಲೀಸ ರು ಸೇರಿದಂತೆ ಎರಡು ಕೋಮಿನ ಯುವಕರು ಗಾಯಗೊಂಡಿದ್ದ ರು.
ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ ಟ್ಟಣದ ಮಸೀದಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಮಹಿಳಾ ಕಾರ್ಯಕರ್ತರ ಮೇಲೂ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಸದ್ಯ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದೆ. ಎ ಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದ್ದು, ಪ್ರತಿಭಟನೆ ನಿಯಂತ್ರಿಸಲು ಪೊಲೀಸರ ಹರಸಾಹಸ ನಡೆಸುತ್ತಿದ್ದಾರೆ. ಲಾಠಿ ಚಾರ್ಜ್ ಗೆ ಮಹಿಳಾ ಕಾರ್ಯಕರ್ತರು ಗಾಯಗೊಂಡಿದ್ದಾರೆ.
ಉದ್ರಿಕ್ತ ಗುಂಪಿನಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಗಳ ಜಖಂ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಅನುಮಾನಗೊಂಡ 20ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಮದ್ದೂರು ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಕಲ್ಲು ತೂರಾಟ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತಿದೆ.

ಜಿಲ್ಲೆಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪ್ರತಿಷ್ಠಾಪಿಸಿರುವ ಗಣೇಶಮೂರ್ತಿಗಳ ಸ್ಥಳಗಳಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಪ್ರತಿಷ್ಠಾಪಿಸಿರುವ ಗ ಣೇಶಮೂರ್ತಿಗಳ ಸ್ಥಳಗಳಲ್ಲಿ ಮೂರ್ತಿಗಳ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಗಣೇಶಮೂರ್ತಿಗಳು ಕಾಣದಂತೆ ಅಡ್ಡಲಾಗಿ ಪರದೆಗ ಳ ಅಳವಡಿಕೆ ಮಾಡಲಾಗಿದೆ.
ಸೋಮವಾರ ಗಣೇಶಮೂರ್ತಿಗಳ ವಿಸರ್ಜನೆ ಮಾಡದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಮದ್ದೂರು ಪರಿಸ್ಥಿತಿ ತಹಬದಿಗೆ ಬರುವವರೆಗೂ ಮುಂಜಾಗ್ರತೆ ವಹಿಸಲಾಗುತ್ತಿದೆ.




