ರಾಮನವಮಿ ಮೆರವಣಿಗೆಯ ವೇಳೆ ಕಲ್ಲು ತೂರಾಟ..! ಉದ್ವಿಗ್ನ ಸ್ಥಿತಿ!!

Share with

ಮುರ್ಷಿದಾಬಾದ್‌: ಪಶ್ಚಿಮಬಂಗಾಳದ ಎರಡು ಕಡೆ ಶುಕ್ರವಾರ ರಾಮನವಮಿ ಮೆರವಣಿಗೆಯ ಸಂದರ್ಭ ಎರಡು ಸಮುದಾಯಗಳ ನಡುವೆ ನಡೆದ ವಾಗ್ವಾದ ಹಿಂಸಾಚಾರಕ್ಕೆ ತಿರುಗಿದ ನಂತರ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಎರಡೂ ಕಡೆಯವರು ಕಲ್ಲು ತೂರಾಟ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಘುನಾಥಗಂಜ್‌ನಲ್ಲಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಒಂದು ಸಮುದಾಯದ ಸದಸ್ಯರು ಆರೋಪಿಸಿದರೆ, ಇನ್ನೊಂದು ಸಮುದಾಯದ ಸದಸ್ಯರು ರ್ಯಾಲಿಯ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಸ್ಥಳೀಯ ಪೊಲೀಸರು ಮತ್ತು ಕೇಂದ್ರ ಪಡೆಗಳನ್ನು ಪ್ರದೇಶದಲ್ಲಿ ನಿಯೋಜಿಸಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳು ರೂಟ್ ಮಾರ್ಚ್ ಗಳನ್ನು ನಡೆಸುತ್ತಿದ್ದಾರೆ.

ಪುರುಲಿಯಾದ ಪ್ಯಾರಾದಲ್ಲಿ ಇದೇ ರೀತಿಯ ಘಟನೆ ವರದಿಯಾಗಿದ್ದು, ಸ್ಥಳೀಯ ಅಧಿಕಾರಿಗಳ ಪ್ರಕಾರ, ಅಲ್ಲಿನ ಪರಿಸ್ಥಿತಿಯನ್ನು ಸಹ ನಿಯಂತ್ರಣಕ್ಕೆ ತರಲಾಗಿದೆ.

ರಾಮ ನವಮಿ ರ್ಯಾಲಿಯಲ್ಲಿ ಭಾಗವಹಿಸಲು ಬಂದ ಜನರ ಗುಂಪೊಂದು ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಇನ್ನೊಂದು ಸಮುದಾಯದ ಸದಸ್ಯರು ದಾಳಿ ನಡೆಸಿದ್ದಾರೆ ಎಂದು ಪುರುಲಿಯಾದ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ತಿವಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.


Share with

Leave a Reply

Your email address will not be published. Required fields are marked *