ಮಂಗಳೂರು: ನಗರದಲ್ಲಿ ಸೋಮವಾರ (ಆ.19) ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ಬಳಿಕ ನಡೆದ ಬಸ್ ಗೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಶಾಹುಲ್ ಅಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಎಂಬ ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳನ್ನು ಪತ್ತೆಹಚ್ಚುವ ಸಲುವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಮಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರ ಪಾಲಿಕೆಯ ಮುಂಭಾಗ ಪ್ರತಿಭಟನೆ ಮಾಡುತಿದ್ದ ಸಂದರ್ಭದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಖಾಸಗಿ ಸಿಟಿ ಬಸ್ಸೊಂದಕ್ಕೆ 10-15 ಜನ ಕಿಡಿಗೇಡಿಗಳು ಬಸ್ಸನ್ನು ತಡೆದು ಕಲ್ಲುಗಳಿಂದ ಬಸ್ಸಿನ ಮುಂಬಾಗದ ಗಾಜನ್ನು ಒಡೆದು ನಷ್ಟ ಉಂಟು ಮಾಡಿರುತ್ತಾರೆ
ಈ ಘಟನೆಗೆ ಸಂಬಂಧಿಸಿದಂತೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.