ಕಾಸರಗೋಡು, ನೆಲ್ಲಿಕುಂಜೆ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ..! 20ಕ್ಕೂ ಅಧಿಕ ಮಂದಿಗೆ ಕಡಿತ

Share with

ಕಾಸರಗೋಡು: ನೆಲ್ಲಿಕುಂಜೆ ಕಸಬಾ ಕಡಲತೀರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ. 20ಕ್ಕೂ ಹೆಚ್ಚು ಜನರಿಗೆ ಕಚ್ಚಿದೆ. ಸೋಮವಾರ ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಯ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು,ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇನ್ನು ಭಾನುವಾರ ಆರು ಜನರಿಗೆ ನಾಯಿ ಕಚ್ಚಿದ್ದು ಸಾಕುಪ್ರಾಣಿಗಳಿಗೂ ಕಚ್ಚಿರುವ ಶಂಕೆ ವ್ಯಕ್ತವಾಗಿದೆ. ಇದರೊಂದಿಗೆ ಸ್ಥಳೀಯರು ಭಯಭೀತರಾಗಿದ್ದಾರೆ. ಸಮಸ್ಯೆ ಪರಿಹರಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಕಾಸರಗೋಡು ನಗರದ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರಗೊಂಡಿದೆ.


Share with

Leave a Reply

Your email address will not be published. Required fields are marked *