ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮ

Share with

ನಗರದಲ್ಲಿರುವ ಕೆಲವು ಯುನಿಸೆಕ್ಸ್‌ ಸೆಲೂನ್‌ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರು.

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರು ಎಚ್ಚರಿಕೆಯನ್ನು ನೀಡಿದ್ದಾರೆ.

ನಗರದಲ್ಲಿರುವ ಕೆಲವು ಯುನಿಸೆಕ್ಸ್‌ ಸೆಲೂನ್‌ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ನಗರದ 14 ಸೆಲೂನ್‌ಗಳಿಗೆ ದಿಢೀರ್‌ ಭೇಟಿ ನೀಡಿ ತಪಾಸಣೆ ನಡೆಸಲಾಗಿದೆ.

ಸೆಲೂನ್‌ ಮಾಲಕರು ತಮ್ಮ ಕೆಲಸಗಾರರ ಬಗ್ಗೆ ಪೊಲೀಸ್‌ ದೃಢೀಕರಣ ಪಡೆಯಬೇಕು ಮತ್ತು ಎಲ್ಲಾ ಗ್ರಾಹಕರ ಮಾಹಿತಿಯನ್ನು ದಾಖಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದರು.


Share with

Leave a Reply

Your email address will not be published. Required fields are marked *