ಶಾಲೆಗೆ ಹೋಗು ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ!

Share with

ಶಾಲೆಗೆ ಹೋಗುವಂತೆ ಹೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ನಿಪ್ಪಾಣಿ ತಾಲೂಕಿನ ಬೋರಗಾಂವದಲ್ಲಿ ಶಾಲೆಗೆ ಹೋಗುವಂತೆ ಹೇಳಿದ್ದಕ್ಕೆ ವಿದ್ಯಾರ್ಥಿ ಯಶರಾಜ ಅನಿಲ ಪಾಚಂಗೆ (15) ನೇಣು ಹಾಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

8ನೇ ತರಗತಿ ಓದುತ್ತಿದ್ದ ಯಶರಾಜ ಕಳೆದ 8 ದಿನದಿಂದ ಶಾಲೆಗೆ ಹೋಗಿರಲಿಲ್ಲ. ಶಾಲೆಗೆ ಹೋಗುವಂತೆ ಒತ್ತಾಯಿಸಿದಾಗ ಕುಂಬಾರನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ.


Share with

Leave a Reply

Your email address will not be published. Required fields are marked *