ಮೂಡಬಿದ್ರೆ: ಮೂಡಬಿದ್ರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್(18) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪನವರ ಎಂಬುವವರ ಪುತ್ರ.
ತಾವು ಬರುವವರೆಗೆ ಶವ ಸ್ಥಳಾಂತರಿಸದಂತೆ ಪೋಷಕರು ಆಗ್ರಹಿಸಿದ್ದಾರೆ. ಸದ್ಯ ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.