ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಪುತ್ತೂರಿನ ಕುರಿಯ ಪಡ್ಡು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಪುತ್ತೂರು ಪೊಲೀಸರು ಭೇಟಿ ನೀಡಿದ್ದು, ಸಾವಿಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.