36 ವರ್ಷಗಳ ಬಳಿಕ ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಚಿಂತನೆ ನಡೆದಿದೆ. KPCC ಇದಕ್ಕೆ ಪೂರಕವಾಗಿ ಪ್ರಸ್ತುತ ಪರಿಸ್ಥಿತಿ, ಕಾರ್ಯಸಾಧ್ಯತೆಯ ಬಗ್ಗೆ ಸವಿಸ್ತಾರವಾದ ವರದಿ ನೀಡಲು ಇಬ್ಬರು ಸಚಿವರನ್ನು ಒಳಗೊಂಡ ಒಂಬತ್ತು ಸದಸ್ಯರ ಸಮಿತಿ ರಚಿಸಿದೆ.

KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಸಮಿತಿ ರಚಿಸಿದ್ದು, ಇಂತಹ ಚುನಾವಣೆಯಿಂದ ಹೊಸ ನಾಯಕರನ್ನು ಬೆಳಕಿಗೆ ತರಲು ಸಹಕಾರಿಯಾಗಲಿದೆ ಎಂದಿದ್ದಾರೆ. ಮುಂದಿನ 15 ದಿನಗಳಲ್ಲಿ ವರದಿ ನೀಡಲು ಸೂಚಿಸಿದ್ದಾರೆ.




