ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಂದ್ ಕರೆ ನೀಡಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಿಎನ್ಎಸ್ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಇಂದಿನಿಂದ ಮೇ 6ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.ಮಂಗಳೂರು ನಗರ ಪೊಲೀಸ್ ಆಯುಕ್ತಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ(ಬಿಎನ್‌ಎಸ್), 2023 ರ ಸೆಕ್ಷನ್ 163 ರ ಅಡಿಯಲ್ಲಿ ತ್ವರಿತವಾಗಿ ನಿಷೇಧಾಜ್ಞೆಗಳನ್ನು ವಿಧಿಸಿದೆ. ಈ ಆದೇಶವು ಇಂದು, ಮೇ 2, 2025 ರಂದು ಬೆಳಿಗ್ಗೆ 6 ಗಂಟೆಗೆ ಜಾರಿಗೆ ಬಂದಿದ್ದು, ಮೇ 6, 2025 ರಂದು ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.