ಸುಳ್ಯ: ಸುಳ್ಯ ಮೂಲದ ಮಹಿಳೆಯೋರ್ವರು ಬೆಂಗಳೂರಿನಲ್ಲಿ ಸಾವಿಗೆ ಶರಣಾದ ಘಟನೆ ವರದಿಯಾಗಿದೆ.
ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಶ್ರೀಮತಿ ಉಷಾ ದಂಪತಿಯ ಪುತ್ರಿ ಶ್ರೀಮತಿ ಐಶ್ವರ್ಯ(26) ಅವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಐಶ್ವರ್ಯ ಅವರನ್ನು ಕೆಲವು ವರ್ಷದ ಹಿಂದೆ ಕನಕಮಜಲು ಗ್ರಾಮದ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಬೆಂಗಳೂರಿನ ಕಂಪೆನಿಯೊಂದರಲ್ಲಿ ಕೆಲಸಕಿದ್ದ ಐಶ್ವರ್ಯ ಅವರು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.