ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಬಸ್‌ನಲ್ಲಿ ಬೆಂಕಿ ಕಾಣಿಸಿಹೊಂಡ ತಕ್ಷಣವೇ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಗಿದ್ದು, ಸ್ಥಳಕ್ಕೆ ಸುಳ್ಯದ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.