
ಸುಳ್ಯ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಎಲಿಮಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್ ಎಂದು ಗುರುತಿಸಲಾಗಿದೆ.

ಮೂಲತಃ ಚೊಕ್ಕಾಡಿಯವರಾಗಿರುವ, ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ ಶಮಂತ್ ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಆವರಣದ ಶೌಚಾಲಯದ ಹಿಂಬದಿ ಗಿಡವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳೀಯರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈತ ಕಳೆದ ವರ್ಷ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿದ್ದ ಈತ ಸಾವಿನ ದವಡೆಯಿಂದ ಪಾರಾಗಿದ್ದ.




