ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಸುಮಿತ್ ಮೇತ್ರಿ, ಜಯಶ್ರೀ ಕದ್ರಿ ಆಯ್ಕೆ

Share with

ಉಡುಪಿ: ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ದಿ. ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗೆ ವಿಜಯಪುರದ ಸುಮಿತ್ ಮೇತ್ರಿ ಅವರ ‘ಈ ಕಣ್ಣುಗಳಿಗೆ ಸದಾ ನೀರಡಿಕೆ’ ಹಾಗೂ ಮಂಗಳೂರಿನ ಜಯಶ್ರೀ ಬಿ. ಕದ್ರಿ ಅವರ ‘ಕೇಳಿಸದ ಸದ್ದುಗಳು’ ಕೃತಿಗಳು ಆಯ್ಕೆಯಾಗಿದೆ.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. ಅವರು, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸಂಸ್ಥೆಯು 2023ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನಗಳನ್ನು ಪ್ರಶಸ್ತಿಗೆ ಆಹ್ವಾನಿಸಿತ್ತು. ಪ್ರಶಸ್ತಿಗೆ ಒಟ್ಟು 42 ಕೃತಿಗಳು ಬಂದಿದ್ದು, ಹಿರಿಯ ವಿಮರ್ಶಕರಾದ ಬೆಂಗಳೂರಿನ ಪ್ರೊ. ಎಚ್. ದಂಡಪ್ಪ ಹಾಗೂ ಉಡುಪಿಯ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ತೀರ್ಪುಗಾರರಾಗಿ ಸಹಕರಿಸಿದರು ಎಂದರು.
ಪ್ರಶಸ್ತಿಯು 10 ಸಾವಿರ ನಗದು, ಪ್ರಶಸ್ತಿಪತ್ರ ಹಾಗೂ ಫಲಕವನ್ನು ಒಳಗೊಂಡಿದ್ದು, ಇಬ್ಬರಿಗೆ ಹಂಚಿಹೋಗಿವೆ. ಆಗಸ್ಟ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ನಡೆಸಲಾಗುವುದು ಎಂದು ಪ್ರಶಸ್ತಿ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ್ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೆೈ, ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನದ ನಿರ್ದೇಶಕ ನಾರಾಯಣ ಮಡಿ ಇದ್ದರು.


Share with

Leave a Reply

Your email address will not be published. Required fields are marked *