
ಉಪ್ಪಳ :ಭಾರತೀಯ ಜನತಾ ಪಕ್ಷದ ಕುಂಬಳೆ ಮಂಡಲ ಅಧ್ಯಕ್ಷರ ಪಧಗ್ರಹಣ ಕಾರ್ಯಕ್ರಮವು ಕುಂಬಳೆ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಜರಗಿತು ಸಭೆಯ ಅಧ್ಯಕ್ಷ ಸ್ಥಾನವನ್ನ ಮಂಡಲ ಉಪಾಧ್ಯಕ್ಷೆ ಪ್ರೇಮಲತಾ ಗಟ್ಟಿ ವಹಿಸಿದ್ದರು ಬಿಜೆಪಿ ಜಿಲ್ಲಾಧ್ಯಕ್ಷರಾದ ರವೀಶ ತಂತ್ರಿ ಕುಂಟಾರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನೂತನ ಮಂಡಲ ಅಧ್ಯಕ್ಷರಿಗೆ ಶುಭವನ್ನ ಕೋರಿ ಮುಂದಿನ ಪಕ್ಷದ ಕಾರ್ಯ ಚಟುವಟಿಕೆಯ ಬಗ್ಗೆ ವಿವರಿಸಿದರು , ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವಿಜಯಕುಮಾರ್ ರೈ, ಜಿಲ್ಲಾ ಕಾರ್ಯದರ್ಶಿ ಮಣಿಕಂಠರ ರೈ ರಾಜ್ಯ ಕೌನ್ಸಿಲ್ ಸದಸ್ಯರಾದ ವಿ ರವೀಂದ್ರ ರವರು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು ನಂತರ ನೂತನ ಮಂಡಲ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸುನಿಲ್ ಅನಂತಪುರ ರವರು ಮಾತನಾಡಿ ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಪೂರ್ಣ ಸಹಕಾರ ಪಕ್ಷದೊಂದಿಗೆ ಇರಲಿ ಎಂಬುದಾಗಿ ವಿನಂತಿಸಿಕೊಳ್ಳುತ್ತಾ ಕಾರ್ಯಕ್ರಮದಲ್ಲಿ ಆಗಮಿಸಿದ ಪಕ್ಷದ ನಾಯಕರುಗಳು ನೂತನ ಅಧ್ಯಕ್ಷರಿಗೆ ಶಾಲು ಹಾಕಿ ಅಭಿನಂದಿಸಿದರು ಮಂಡಲ ಪ್ರಧಾನ ಕಾರ್ಯದರ್ಶಿ ವಸಂತ್ ಕುಮಾರ್ ಮಯ್ಯ ಸ್ವಾಗತಿಸಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ಅವಿನಾಶ್ ಕಾರಂತ ವಂದಿಸಿದರು ಕಾರ್ಯಕ್ರಮದಲ್ಲಿ ಪಕ್ಷದ ಜವಾಬ್ದಾರಿಯುತ ನಾಯಕರು ಕಾರ್ಯಕರ್ತರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು