ಅನೈತಿಕ ಸಂಬಂಧದ ಶಂಕೆ..; ಪತ್ನಿಯನ್ನೇ ಹ*ತ್ಯೆಗೈದ ಪತಿ..!

Share with

ಮಂಡ್ಯ: ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆಗೈದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಆಲಗೂಡು ಗ್ರಾಮದಲ್ಲಿ ಬುಧವಾರ (ಜು.01) ತಡರಾತ್ರಿ ನಡೆದಿದೆ.

ರಶ್ಮಿ ಕೊಲೆಯಾದ ಮಹಿಳೆ. ಪತಿ ರಮೇಶ್ ಎಂಬಾತ ಪತ್ನಿಯ ಹತ್ಯೆ ಮಾಡಿದ್ದಾನೆ. ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ.

ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಗಂಡ ಹೆಂಡತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಅದರಂತೆ ಬುಧವಾರ ರಾತ್ರಿಯೂ ಜಗಳವಾಗಿ ವಿಕೋಪಕ್ಕೆ ತಿರುಗಿದೆ. ಆಗ ಪತಿ ರಮೇಶ್ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ.

ಸ್ಥಳಕ್ಕೆ ಅರಕೆರೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ರಮೇಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *