ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Share with

ಸೆಪ್ಟೆಂಬರ್ 26ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿತು.

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು , ಜನಜಾಗೃತಿ ವೇದಿಕೆ ಬಂಟ್ವಾಳ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ ಇವರ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸೆ.26ರಂದು ಬಂಟ್ವಾಳ ತಾಲೂಕಿನ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿತು.

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸೆ.26ರಂದು ಬಂಟ್ವಾಳ ತಾಲೂಕಿನ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿತು.

ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ರೊನಾಲ್ಡ್ ಡಿಸೋಜಾ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಸಿಂಧು ಕ್ಲಿನಿಕಲ್ ಸೈಕಾಲಜಿ ಕ್ಷೇಮ ಡಿಪಾರ್ಟ್ಮೆಂಟ್ ದೇರಳಕಟ್ಟೆ ಇವರು ಭಾಗವಹಿಸಿ ದುಶ್ಚಟದಿಂದಾಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಗಂಗಾಧರ ಆಳ್ವ, ತುಂಬೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅನಿತಾ ಉಪಸ್ಥಿತರಿದ್ದರು. ಕಾಲೇಜಿನ ಹಿರಿಯ ಉಪನ್ಯಾಸಕ ಕವಿತಾ ಸ್ವಾಗತಿಸಿ ತುಂಬೆ ವಲಯದ ಮೇಲ್ವಿಚಾರಕಿ ಮಮತಾ ವಂದಿಸಿದರು. ಕಾಲೇಜಿನ ಉಪನ್ಯಾಸಕ ವಿ .ಎಸ್ .ಭಟ್ ಕಾರ್ಯಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *