ಏ.3ರಂದು ನಡೆಯಲಿರುವ ತಮಿಳುನಾಡು ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ 2 ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಜತೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ವಿಜಯ್ ಚೆನ್ನೈನ ಪೆರಂಬೂರು & ತಿರುಚಿರಾಪಳ್ಳಿ ಪೂರ್ವದಿಂದ ಸ್ಪರ್ಧಿಸಲಿದ್ದಾರೆ.

ವಿಲ್ಲಿವಕ್ಕಂನಿಂದ ಆಧವ್ ಅರ್ಜುನ, ಗೋಬಿಚೆಟ್ಟಿಪಾಳ್ಯಂನಿಂದ KA ಸೆಂಗೊಟ್ಟೆಯನ್, ತಿರುಚೆಂಗೋಡ್ನಿಂದ ಅರುಣಾಜ್ & ತಿರುಪ್ಪರಂಕುಂದ್ರಂನಿಂದ CTR ನಿರ್ಮಲ್ ಕುಮಾರ್ ಈ ಪಟ್ಟಿಯಲ್ಲಿದ್ದಾರೆ.




