ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ತಮ್ಮ ಪಾಲಿನ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಬೇಕೆಂದು ಸ್ಟಾಲಿನ್ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿಸಲ್ಲಿಸಿದೆ.
ತಮ್ಮ ಪಾಲಿನ ನೀರು ಬಿಡದ ಹಿನ್ನಲೆ ನದಿಯ ಪಾತ್ರದಲ್ಲಿ ರೈತರು ಬೆಳೆದ ಬೆಳೆಗಳಿಗೆ ಹಾನಿಯಾಗುತ್ತದೆ. ಹೀಗಾಗಿ, ಕರ್ನಾಟಕ ಸರ್ಕಾರ ನೀರು ಬಿಡುವಂತೆ ಸೂಚಿಸಬೇಕೆಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಯಲ್ಲಿ ತಿಳಿಸಲಾಗಿದೆ.