ತಮಿಳುನಾಡು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ !!

Share with

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್‌ಅವರನ್ನು ಆಯ್ಕೆ ಮಾಡಲಾಗಿದೆ.

ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡರಾದ ಅಣ್ಣಾಮಲೈ ಅವರ ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಅವಧಿ ಮುಗಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಈ ಹೊಸ ಘೋಷಣೆ ಮಾಡಿದೆ.

ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದ್ದರು. ಹಾಗೂ ನೈನಾರ್ ನಾಗೇಂದ್ರನ್ ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ ಏಕೈಕ ವ್ಯಕ್ತಿಯಾಗಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.


Share with

Leave a Reply

Your email address will not be published. Required fields are marked *