ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ

Share with

ಸಂಸದ ತೇಜಸ್ವಿ ಸೂರ್ಯ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಮದುವೆ ನಡೆದಿದೆ.

ಮದುವೆಗೆ 2 ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರೀ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಮಾರ್ಚ್‌ 9ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ನಡೆಯಲಿದೆ.


Share with