ತೆಲುಗು ಸಿನಿಮಾ ರಂಗದ ಖ್ಯಾತ ನಟರಾದ ಚಂದ್ರ ಮೋಹನ್ ಇನ್ನಿಲ್ಲ!

Share with

ಹೈದರಾಬಾದ್: ತೆಲುಗು ಸಿನಿಮಾ ರಂಗದ ಖ್ಯಾತ ನಟರಾದ ಚಂದ್ರ ಮೋಹನ್(82) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎಂದು ವರದಿಯಾಗಿದೆ.

ತೆಲುಗು ಸಿನಿಮಾ ರಂಗದ ಖ್ಯಾತ ನಟರಾದ ಚಂದ್ರ ಮೋಹನ್.

ನೂರಾರು ಸಿನಿಮಾಗಳಲ್ಲಿ ನಾಯಕರಾಗಿ, ಅನೇಕ ಚಿತ್ರಗಳಲ್ಲಿ ಸಹ ನಟರಾಗಿ ಕೆಲಸ ಮಾಡಿದ ಇವರು ಹಾಸ್ಯ ಪಾತ್ರಗಳ ಮೂಲಕ ಹೆಚ್ಚಾಗಿ ಅಭಿಮಾನಿಗಳನ್ನು ರಂಜಿಸಿದ್ದರು. 1943 ಮೇ 23ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪಮಿಡಿಮುಕ್ಕಲ ಗ್ರಾಮದಲ್ಲಿ ಜನಿಸಿದ ಚಂದ್ರ ಮೋಹನ್ ಅವರು 1966ರಲ್ಲಿ “ರಂಗುಲ ರತ್ನಂ” ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಇದಕ್ಕಾಗಿ ಅವರು ರಾಜ್ಯ ಸರ್ಕಾರದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರು. ಎರಡು ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಮತ್ತು ಅತ್ಯುತ್ತಮ ನಟ ಮತ್ತು ಪಾತ್ರ ಕಲಾವಿದರಾಗಿ ರಾಜ್ಯ ಸರ್ಕಾರದಿಂದ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಎರಡು ನಂದಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.

ಹಿರಿಯ ನಟನ ನಿಧನಕ್ಕೆ ಅನೇಕ ಸಿನಿಮಾ ನಟರು, ನಟಿಯರು ಹಾಗೂ ತಂತ್ರಜ್ಞರು ಸಂತಾಪ ಸೂಚಿಸಿದ್ದಾರೆ. ರಾಜಕೀಯ ಗಣ್ಯರು ಕೂಡ ಕಂಬನಿ ಮಿಡಿದಿದ್ದಾರೆ.


Share with

Leave a Reply

Your email address will not be published. Required fields are marked *